15/06/2026
ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಕನ್ನಡ ಪರ ಹೋರಾಟ💛❤️
ನಿನ್ನೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕಾಕ್ರೋಚ್ ಜನತಾ ಪಕ್ಷ (CJP) ಆಯೋಜಿಸಿದ್ದ ಪ್ರತಿಭಟನೆಯ ವೇಳೆ ಕೆಲವರು ಹಿಂದಿ ಹಾಗೂ ತಮಿಳು ಭಾಷೆಗಳಲ್ಲಿ ಭಾಷಣ ಮಾಡುತ್ತಿರುವುದನ್ನು ವಿರೋಧಿಸಿ ನಮ್ಮ ಕರ್ನಾಟಕ ಸೇನೆಯ ಯುವ ಘಟಕದ ರಾಜ್ಯಾಧ್ಯಕ್ಷರು ಕನ್ನಡ ಪರ ಹೋರಾಟ ನಡೆಸಿದರು. ಈ ಪ್ರತಿಭಟನೆಯಲ್ಲಿ ನಮ್ಮ ಕರ್ನಾಟಕ ಸೇನೆಯ ಯುವ ಘಟಕದ ರಾಜ್ಯಾಧ್ಯಕ್ಷರು ರಘು ಬಸವರಾಜ್ ಪಡುಕೋಟೆ , ಯಲಹಂಕ ಘಟಕದ ಅಧ್ಯಕ್ಷರಾದ ಅಭಿ ಕನ್ನಡಿಗ ಹಾಗೂ ವಿವಿಧ ಕ್ಷೇತ್ರ ಘಟಕಗಳ ಪದಾಧಿಕಾರಿಗಳು ಭಾಗವಹಿಸಿದರು.
ಕರ್ನಾಟಕದ ನೆಲದಲ್ಲಿ ನಡೆಯುವ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು ಹಾಗೂ ಕನ್ನಡದಲ್ಲೇ ಭಾಷಣ ಮಾಡಬೇಕು ಎಂದು ಅವರು ಒತ್ತಾಯಿಸಿದರು. ಕನ್ನಡಿಗರ ಭಾವನೆಗಳಿಗೆ ಗೌರವ ನೀಡಬೇಕು ಮತ್ತು ಕರ್ನಾಟಕದಲ್ಲಿ ಕನ್ನಡ ಭಾಷೆಯ ಮಹತ್ವವನ್ನು ಎಲ್ಲರೂ ಅರಿತುಕೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಇತ್ತೀಚೆಗೆ ಫ್ರೀಡಂ ಪಾರ್ಕ್‌ನಲ್ಲಿ ನಡೆದ CJP ಪ್ರತಿಭಟನೆಯ ಸಂದರ್ಭದಲ್ಲಿ ತಮಿಳು ಭಾಷಿಕರನ್ನು ವಿಶೇಷವಾಗಿ ಆಹ್ವಾನಿಸಿದ ವಿಷಯವ