09/08/2026
ಜಗಳೂರು ವಿಧಾನಸಭಾ ಕ್ಷೇತ್ರದ ಜನಪ್ರಿಯ ಮಾಜಿ ಶಾಸಕರಾದ *ಶ್ರೀ ಎಸ್.ವಿ. ರಾಮಚಂದ್ರ* ರವರು, ಇಂದು ಪ್ರವಾಸ ಕಾರ್ಯಕ್ರಮದ ನಡುವೆ ಕ್ಷೇತ್ರದ ಕ್ಯಾರಕಟ್ಟೆ ಗ್ರಾಮದ ಮಾಜಿ ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀ ನಂದ್ಯಪ್ಪ ಅವರ ನಿವಾಸಕ್ಕೆ ಸಮಾರಂಭದ ಹಿನ್ನೆಲೆಯಲ್ಲಿ ಆತ್ಮೀಯವಾಗಿ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರನ್ನು ಸನ್ಮಾನಿಸಿ, ಅವರೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿದರು. ಇದೇ ವೇಳೆ ಪಕ್ಷದ ಸಂಘಟನೆ, ಅಭಿವೃದ್ಧಿ ಕಾರ್ಯಗಳು ಹಾಗೂ ಮುಂದಿನ ಕಾರ್ಯತಂತ್ರಗಳ ಕುರಿತು ಸಾರ್ಥಕ ಚರ್ಚೆ ನಡೆಸಲಾಯಿತು.
ಗ್ರಾಮದ ಜನರೊಂದಿಗೆ ಬೆರೆತು, ಅವರ ಸಮಸ್ಯೆಗಳನ್ನು ಆಲಿಸಿ, ಅಭಿವೃದ್ಧಿಯ ವಿಚಾರ ವಿನಿಮಯ ನಡೆಸಿದರು